ಭೂಮಿ ಮೇಲೊಂಡು ಕೈಲಾಸ, ಕಾರಿಂಜೇಶ್ವರ ಬೆಟ್ಟ
source and pic credit: https://ift.tt/3tSeLqF
ಹಚ್ಚ ಹಸುರಿನ ಇಕ್ಕೆಲಗಳು, ಬಾನೆತ್ತರಕ್ಕಿರುವ ಬಂಡೆಗಳು, ಹತ್ತಿದಷ್ಟೂ ಮುಗಿಯದ ಮೆಟ್ಟಿಲುಗಳು, ದೇವಾಲಯವನ್ನು ಸುತ್ತುವರೆದಿರುವ ಕಪಿಗಳು. ಇಲ್ಲಿರುವ ಬೆಟ್ಟದ ಮೇಲೆ ನೆಲೆಸಿದ್ದಾನೆ ಭಕ್ತರ ಕಾಯುವ ಈಶ. ಭಕ್ತರ ಪಾಲಿಗೆ ಈ ದೇವಾಲಯವೇ ಭೂಕೈಲಾಸ. ಇದು ದಕ್ಷಿಣಕನ್ನಡದ ಕಾರಿಂಜ ಕ್ಷೇತ್ರದಲ್ಲಿ ಗಿರಿಶಿಖರದಲ್ಲಿ ನೆಲೆಯಾದ ವಿಷಕಂಠನ ಸನ್ನಿಧಿ.
source and pic credit: https://ift.tt/3tSeLqF
ದೂರದಿಂದ ನೋಡಿದಾಗ ಏಕಶಿಲಾ ಬೆಟ್ಟದಂತೆ ಭಾಸವಾಗುವ ಕಾರಿಂಜೇಶ್ವರ ದೇವಸ್ಥಾನಬಹಳ ಸುಂದರವಾದ ದೇವಾಲಯ. ದೇವಾಲಯದ ಸಮೀಪವಿರುವ ಬೆಟ್ಟವು ಬೃಹತ್ ಬಂಡೆಗಳಿಂದ ಮಾಡಲ್ಪಟ್ಟಿದ್ದು ಕಪಿಗಳಿಗೆ ಆಶ್ರಯವಾಗಿದೆ.ಕಾರಿಂಜ ಬೆಟ್ಟವು ಸಮುದ್ರ ಮಟ್ಟದಿಂದ 1500 ಅಡಿ ಎತ್ತರದಲ್ಲಿದೆ. ಶಿವನಿಗೂ, ಪಾರ್ವತಿಗೂ ಪ್ರತ್ಯೇಕ ದೇವಸ್ಥಾನವಿರುವುದು ಇಲ್ಲಿನ ವೈಶಿಷ್ಟ್ಯ. ಗುಡ್ಡದ ನಡುವೆ ಪಾರ್ವತಿ ಹಾಗೂ ಗುಡ್ಡದ ತುತ್ತ ತುದಿಯಲ್ಲಿ ಶಿವನಿಗೆ ಶಿಲಾಮಯ ಗರ್ಭಗುಡಿಯಿದೆ.
source and pic credit: https://ift.tt/3tSeLqF
ಗುಡ್ಡದ ಕೆಳಗಿನಿಂದ ಮೇಲಿನ ಶಿವ ದೇವಸ್ಥಾನದ ತನಕ ಸುಮಾರು 5೦೦ಕ್ಕೂ ಹೆಚ್ಚು ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆಯಬೇಕು. ಮೆಟ್ಟಲುಗಳಲ್ಲದೇ ಇತ್ತೀಚೆಗೆ ಕಾರಿಂಜ ಬೆಟ್ಟದ ಅರ್ಧದವರೆಗೆ, ಅಂದರೆ ಪಾರ್ವತಿ ದೇವಸ್ಥಾನ ತನಕ ಉತ್ತಮ ಡಾಂಬರು ರಸ್ತೆ ಕೂಡಾ ನಿರ್ಮಾಣವಾಗಿದೆ.ಹೀಗಾಗಿ ನಡೆಯಲು ಸಾಧ್ಯವಿಲ್ಲದವರು, ವಯಸ್ಸಾದವರು ಈ ರಸ್ತೆಯನ್ನು ಅವಲಂಬಿಸಬಹುದು.
source and pic credit: https://ift.tt/3tSeLqF
ಈ ದೇವಾಲಯ ಧಾರ್ಮಿಕವಾಗಿ ನಾಲ್ಕು ಯುಗಗಳಲ್ಲಿ ವಿವಿಧ ಹೆಸರುಗಳಿಂದ ಅಸ್ತಿತ್ವದಲ್ಲಿದ್ದು, ಭೂ ಕೈಲಾಸ ಎಂಬ ಹೆಸರನ್ನುಪಡೆದುಕೊಂಡಿದೆ. ಈ ಕ್ಷೇತ್ರವನ್ನು ಕೃತ ಯುಗದಲ್ಲಿ ರೌದ್ರಗಿರಿ, ತ್ರೇತಾ ಯುಗದಲ್ಲಿ ಗಜೇಂದ್ರಗಿರಿ, ದ್ವಾಪರದಲ್ಲಿ ಭೀಮಶೈಲವೆಂದು ಕರೆಯುತ್ತಿದ್ದರೆಂಬ ಐತಿಹ್ಯವಿದೆ. ಇಡೀ ಬೆಟ್ಟ ಪ್ರದೇಶ ಸುಮಾರು 25 ಎಕರೆ ವ್ಯಾಪಿಸಿದೆ. ಈ ದೇವಾಲಯವನ್ನು ಕೊಡ್ಯಮಲೆಯ ದಟ್ಟ ಅರಣ್ಯ ಆವರಿಸಿಕೊಂಡಿದೆ.
source and pic credit: https://ift.tt/3tSeLqF
ಕ್ಷೇತ್ರಕ್ಕೆಹೋಗುವುದು ಹೇಗೆ..?
ಮೊದಲು ಬೆಟ್ಟದ ಬುಡದಲ್ಲಿರುವ ಗದೆಯ ಆಕಾರದ ವಿಶಾಲ ’ಗದಾತೀರ್ಥ’ ಕಾಣಸಿಗುತ್ತದೆ. ಶುದ್ಧ ನೀರಿನ ಕೊಳವು ಸುಮಾರು 237 ಮೀ. ಉದ್ದ 55 ಮೀ. ಅಗಲವಿದ್ದು, ಇದರಲ್ಲಿ ಇದು ದೊಡ್ಡಗಾತ್ರದ ಮೀನುಗಳನ್ನು ನೋಡಬಹುದು. ಇಲ್ಲಿ ಜಲಪ್ರೋಕ್ಷಣೆ ಮಾಡಿಕೊಂಡು ಬೆಟ್ಟ ಹತ್ತಲು ಶುರು ಮಾಡಬಹುದು. ಕೆರೆಯಪಕ್ಕದಲ್ಲಿ ವಿಶಾಲವಾದ ಅಶ್ವತ್ಥವೃಕ್ಷ, ಅಲ್ಲೇ ಬಲಕ್ಕೆ ಹುಲ್ಲುಹಾಸಿದ ಹರ ಮತ್ತು ಕಾಡು ಮುಚ್ಚಿಹೋದ ಪುರಾತನ ಗುಹೆಯೊಂದಿದೆ.
source and pic credit: https://ift.tt/3tSeLqF
ಇಲ್ಲಿಂದ ಬೃಹತ್ ಬಂಡೆಯ ಮೆಟ್ಟಿಲು ಏರುತ್ತಾ ಸಾಗಿದರೆ ಪಾರ್ವತಿ ಗುಡಿ ಸಿಗುತ್ತದೆ. ಕೊಡ್ಯಮಲೆ ಅರಣ್ಯ ತಪ್ಪಲಿನಲ್ಲಿರುವ ಈ ಪ್ರದೇಶದಲ್ಲಿರುವ ಗದಾತೀರ್ಥ, ಪಾರ್ವತಿ ಕ್ಷೇತ್ರದ ಸನಿಹ ಏಕಶಿಲಾ ಗಣಪತಿ ಕ್ಷೇತ್ರದ ಎದುರಿಗಿರುವ ಉಗ್ರಾಣಿ ಗುಹೆಗಳು, ಉಕ್ಕುಡದ ಬಾಗಿಲು, ಉಂಗುಷ್ಟ ಮತ್ತು ಮೊಣಕಾಲು ತೀರ್ಥ, ಮಹಾಭಾರತದ ಅರ್ಜುನ ಹಂದಿಗೆ ಬಾಣಬಿಟ್ಟು ಹೋದ ಲಂಬರೇಖೆ ನೋಡಲೇಬೇಕಾದ ಪ್ರಾಕೃತಿಕ ವಿಸ್ಮಯಗಳು. ನಡುವೆ ವಿನಾಯಕ ಗುಡಿಯನ್ನೂ ಹಾಗೂ ಸಣ್ಣಪುಟ್ಟ ತೀರ್ಥಗಳನ್ನು ಕಾಣಬಹುದು. ನಡು ನಡುವೆ, ಕಾಡಿನಿಂದ ಬರುವ ವಾನರ ಸೇನೆಯೂ ಸ್ವಾಗತಿಸುತ್ತದೆ.
source and pic credit: https://ift.tt/3tSeLqF
ಪಾರ್ವತಿ ದರ್ಶನದ ನಂತರ ತೀರಾ ಕಡಿದಾದ ಸುಸಜ್ಜಿತ 142 ಮೆಟ್ಟಿಲುಗಳನ್ನು ಹತ್ತಿ ಹೋದರೆ ಅಲ್ಲಿ ’ಉಕ್ಕಡದ ಬಾಗಿಲು’ ಕಾಣಸಿಗುತ್ತದೆ. ಇದು ಕಲ್ಲಿನಿಂದ ಮಾಡಿದ ದ್ವಾರ. ಅಲ್ಲಿಂದ ಮುಂದಕ್ಕೆ ಬಂಡೆ ಹಾಗೂ ಕುರುಚಲು ಮರ-ಗಿಡಗಳ ನಡುವೆ 118 ಮೆಟ್ಟಿಲುಗಳನ್ನು ಹತ್ತುತ್ತಾ ಸಾಗಿದರೆ ಬೆಟ್ಟದ ತುದಿಯಲ್ಲಿದೆ ಶಿಲಾಮಯ ಶಿವ ದೇವಸ್ಥಾನ.
ಅದಕ್ಕೂ ಮೊದಲು ಮೆಟ್ಟಿಲುಗಳ ಪಕ್ಕ ಉಂಗುಷ್ಟ ತೀರ್ಥ, ಜಾನು ತೀರ್ಥ ಸಿಗುತ್ತದೆ. ಈ ಪುಟ್ಟ ಕೆರೆಗಳನ್ನು ಹಾಗೂ ಕೆಳಗಿನ ಗದಾತೀರ್ಥವನ್ನು ಮಹಾಭಾರತ ಕಾಲದಲ್ಲಿ ಭೀಮಸೇನಾ ನಿರ್ಮಿಸಿದ ಎಂಬ ನಂಬಿಕೆ. ವರ್ಷದ ಎಲ್ಲಾ ದಿನ ಬೆಟ್ಟದ ತುದಿಯಲ್ಲಿರುವ ಈ ಕೆರೆಗಳಲ್ಲಿ ನೀರು ಬತ್ತದಿರುವುದು ವಿಶೇಷ. ದೇವಳ ಪಕ್ಕದಲ್ಲಿರುವ ’ಹಂದಿಕೆರೆ’ಯೂ ಅರ್ಜುನನಿಂದಾಗಿ ಉಂಟಾಯಿತು ಎಂಬ ಕತೆಯಿದೆ.
source and pic credit: https://ift.tt/3tSeLqF
ಬೆಟ್ಟದ ವಿಶೇಷಗಳು
ಬೆಟ್ಟದ ತುದಿಯ ಶಿವ ದೇವಸ್ಥಾನದಿಂದ ನಾಲ್ಲೂ ದಿಕ್ಕಿನಲ್ಲಿ ಹಚ್ಚ ಹಸಿರಾದ ದೃಶ್ಯ ವೈಭವವನ್ನು ನೋಡಬಹುದು. ಇಲ್ಲಿಂದ ಕೆಳಗಿನ ಬೃಹತ್ ಶಿಲಾಬೆಟ್ಟದತ್ತ ಕೂಗಿಕೊಂಡರೆ ಸ್ಪಷ್ಟ ಪ್ರತಿಧ್ವನಿ ನೀಡುವ ಪ್ರತಿಧ್ವನಿ ಕಲ್ಲು ಇದೆ. ಸತ್ಯ ಪ್ರಮಾಣ ಮಾಡುತ್ತಿದ್ದ ಸೀತಾದೇವಿ ಪ್ರಮಾಣ ಕಲ್ಲು ಸಹ ಇದೆ. ವಾನರ ಸೇನೆಗೆ ನಿತ್ಯ ಅನ್ನ ನೈವೇದ್ಯ ನೀಡುವುದು ಇಲ್ಲಿನ ಇನ್ನೊಂದು ವಿಶೇಷ.
source and pic credit: https://ift.tt/3tSeLqF
ಶಿವರಾತ್ರಿ ಈ ದೇವಸ್ಥಾನದ ಪ್ರಧಾನ ಉತ್ಸವ. ನಾಲ್ಕು ದಿನಗಳ ಕಾಲ ನಡೆಯುವ ಜಾತ್ರೆಯ ವೇಳೆ ಗುಡ್ಡದ ಮೇಲಿನಿಂದ ಶಿವನ ವಿಗ್ರಹವನ್ನು ಪಾರ್ವತಿ ದೇವಸ್ಥಾನಕ್ಕೆ ತರುವ ಮೂಲಕ ಶಿವ-ಪಾರ್ವತಿಯರ ಭೇಟಿ ನಡೆಯುತ್ತದೆ. (ಪೌರಾಣಿಕ ಕಥೆಯ ಪ್ರಕಾರ ಶಿವನು ಪಾರ್ವತಿಯ ಸಂಗ ಬಯಸಿ ಮೇಲಿನ ಬೆಟ್ಟದಿಂದ ಬಹಳ ಆತುರದಿಂದ ಇಳಿದು ಬರುತ್ತಾನೆ.ಆದರೆ ಇಲ್ಲಿ ಬಂದು ತಲಪಿದಾಗ ಪಾರ್ವತಿಯು ರಜಸ್ವಲೆಯಾಗಿರುವುದು ತಿಳಿದು, ಅತೀ ವೇಗದಲ್ಲಿ ಆ ಕಡಿದಾದ ಬೆಟ್ಟವನ್ನು ಏರಿ ತನ್ನ ಸ್ಥಾನವನ್ನು ಸೇರುತ್ತಾನೆ. ಇದನ್ನು ಈಗಲೂ ಉತ್ಸವದ ಸಮಯದಲ್ಲಿ ಅರ್ಚಕರು ದೇವರ ವಿಗ್ರಹವನ್ನು ತಲೆಯಲ್ಲಿ ಹೊತ್ತುಕೊಂಡು ಕಡಿದಾದ ಬೆಟ್ಟವನ್ನು ಓಡಿಕೊಂಡೇ ಹೋಗುವುದು ನಡೆದುಕೊಂಡು ಬಂದಿದೆ.
source and pic credit: google.com
ಆಟಿ ಅಮವಾಸ್ಯೆ, ಶ್ರಾವಣ ಅಮವಾಸ್ಯೆಯೂ ವಿಶೇಷ
ತುಳು ಪರಂಪರೆಯ ಆಷಾಢ (ಆಟಿ) ಅಮವಾಸ್ಯೆ ಮತ್ತು ಸೋಣ (ಶ್ರಾವಣ) ಅಮವಾಸ್ಯೆಯಂದು ಇಲ್ಲಿ ತೀರ್ಥ ಸ್ನಾನ ಮಾಡುತ್ತಾರೆ. ಮುಂಜಾನೆಯೇ ಅಸಂಖ್ಯಾತ ಭಕ್ತರು ಜಿಲ್ಲೆಯ ನಾನಾಕಡೆಗಳಿಂದ ಬಂದು ದೇವರ ಸೇವೆಯನ್ನು ಮಾಡುತ್ತಾರೆ.
from ಸುದ್ದಿ - Planet Tv https://ift.tt/3eSRkJn
May 17, 2021 at 03:23PM