ಸಂಚಾರ ನಿಲ್ಲಿಸಿದ ‘ಸಂಚಾರಿ ವಿಜಯ್’; ರಾಷ್ಟ್ರಪ್ರಶಸ್ತಿ ವಿಜೇತ, ಪ್ರತಿಭಾನ್ವಿತ ನಟ ನಿಧನ
Image Credits : mykuwaits.com
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿಧನರಾಗಿದ್ದಾರೆ. ಚಂದನವನಕ್ಕೆ ಇನ್ನಷ್ಟು ಹಿರಿಮೆ ತರಬೇಕಿದ್ದ ನಟನೊಬ್ಬನ ಜೀವನ ದುರಂತದಲ್ಲಿ ಅಂತ್ಯವಾಗಿದೆ. ಸಂಚಾರಿ ವಿಜಯ್ ತಮ್ಮ 38ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಶನಿವಾರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸಂಚಾರಿ ವಿಜಯ್ ರನ್ನು ಚಿಕಿತ್ಸೆಗಾಗಿ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂಚಾರಿ ವಿಜಯ್ ಇಹಲೋಕ ತ್ಯಜಿಸಿದ್ದಾರೆ.
ಸಂಚಾರ ನಿಲ್ಲಿಸಿದ ಸಂಚಾರಿ
Featured Image Credits : @SANCHARIVIJAY/TWITTER
ಕೊರೋನಾ ಸಂಕಷ್ಟದಲ್ಲಿರುವವರಿಗೆ ಫುಡ್ ಕಿಟ್ ವಿತರಿಸಿ ವಾಪಸ್ಸಾಗುತ್ತಿದ್ದ ವೇಳೆ ಸಂಚಾರಿ ವಿಜಯ್ ಹೋಗುತ್ತಿದ್ದ ಬೈಕ್ ಅಪಘಾತಕ್ಕೀಡಾಗಿತ್ತು ಎನ್ನಲಾಗಿದೆ. ಶನಿವಾರ ರಾತ್ರಿ ಸ್ನೇಹಿತನೊಂದಿಗೆ ತೆರಳುತ್ತಿದ್ದ ವೇಳೆ ನಟ ಸಂಚಾರಿ ವಿಜಯ್ ಅವರ ಬೈಕ್ ಅಪಘಾತಕ್ಕೀಡಾಗಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. 48 ಗಂಟೆಗಳು ಕಳೆದರೂ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಪರಿಣಾಮವಾಗಿ ಸಂಚಾರಿ ವಿಜಯ್ಮೃತಪಟ್ಟಿದ್ದಾರೆ..
ಸದಾ ಮಾನವೀಯತೆಯಿಂದ ಹಾಗೂ ಸರಳ ವ್ಯಕ್ತಿತ್ವದಿಂದ ಚಿತ್ರರಂಗದ ಮನಸ್ಸು ಗೆದ್ದಿದ್ದರು ಸಂಚಾರಿ ವಿಜಯ್. ಕೋವಿಡ್-19 ಸಂದರ್ಭದಲ್ಲಿ ಹಲವು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಸಂಚಾರಿ ವಿಜಯ್ಗೆ ನಟನಾ ಕಲೆ ಅದ್ಭುತವಾಗಿ ಒಲಿದಿತ್ತು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಸುಲಲಿತವಾಗಿ ನಿಭಾಯಿಸುತ್ತಿದ್ದರು. ತಾವು ಸೆಲೆಬ್ರಿಟಿ ಎನ್ನುವ ಅಹಂ ಅವರಲ್ಲಿ ಎಂದಿಗೂ ಇರಲಿಲ್ಲ. ಸಂಚಾರಿ ವಿಜಯ್ ನಿಧನಕ್ಕೆ ರಾಜ್ಯದ ವಿವಿಧ ವಲಯಗಳ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ. ತಮ್ಮ ನೆನಪುಗಳನ್ನು, ಶ್ರದ್ಧಾಂಜಲಿಯನ್ನು ತಿಳಿಸಿದ್ದಾರೆ.
ವಿಜಯ್ ಕುಮಾರ್ ‘ಸಂಚಾರಿ’ ವಿಜಯ್ ಆಗಿದ್ದು ಹೇಗೆ?
Image source : New Indian Express
1983ರ ಜುಲೈ 18ರಂದು ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ವಿಜಯ್ ಜನಿಸಿದರು. ವಿಜಯ್ ಕುಮಾರ್ ಬಿ. ಎಂಬುದು ಅವರ ಮೂಲ ಹೆಸರು. ವಿಜಯ್ ಬಹಳ ವರ್ಷಗಳ ಹಿಂದೆಯೇ ತಂದೆ-ತಾಯಿಯನ್ನು ಕಳೆದುಕೊಂಡಿದ್ದರು. ಸಣ್ಣ ವಯಸ್ಸಿನಿಂದಲೇ ನಟನೆ ಬಗ್ಗೆ ಆಸಕ್ತಿ ಹೊಂದಿದ್ದ ವಿಜಯ್, ರಂಗಭೂಮಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದರು. ‘ಸಂಚಾರಿ’ ಥಿಯೇಟರ್ ಗ್ರೂಪ್ ನಿಂದ ಬಂದ ಕಾರಣ ಸ್ಯಾಂಡಲ್ವುಡ್ನಲ್ಲಿ ಸಂಚಾರಿ ವಿಜಯ್ ಎಂದೇ ಅವರು ಖ್ಯಾತಿ ಪಡೆದುಕೊಂಡರು.
2011ರಲ್ಲಿ ತೆರೆಗೆ ಬಂದ ‘ರಂಗಪ್ಪ ಹೋಗ್ಬಿಟ್ಟಾ’ ಸಂಚಾರಿ ವಿಜಯ್ ಅವರ ಮೊದಲ ಸಿನಿಮಾ. ಈ ಚಿತ್ರದಲ್ಲಿ ಸಂಚಾರಿ ವಿಜಯ್ ಕೂಡ ಅಭಿನಯ ಎಲ್ಲರ ಗಮನಸೆಳೆದಿತ್ತು. ರಮೇಶ್ ಅರವಿಂದ್ ಅಭಿನಯಿಸಿದ ಈ ಚಿತ್ರದಲ್ಲಿ ನೀನಾಸಂ ಸತೀಶ್, ಮೊದಲಾದವರು ನಟಿಸಿದ್ದರು. ಅದೇ ವರ್ಷ ತೆರೆಗೆ ಬಂದ ‘ರಾಮ ರಾಮ ರಘು ರಾಮ’ ಚಿತ್ರದಲ್ಲಿ ವಿಜಯ್ ನಟಿಸಿದರು. 2013ರಲ್ಲಿ ಪ್ರೇಮ್ ನಟನೆಯ ‘ದಾಸ್ವಾಳ’ ಚಿತ್ರದಲ್ಲಿ ಪಾತ್ರ ಒಂದನ್ನು ನಿರ್ವಹಿಸಿದ್ದರು. 2014ರಲ್ಲಿ ಬಂದ ‘ಹರಿವು’ ಚಿತ್ರದಲ್ಲಿ ಸಂಚಾರಿ ಮೊದಲ ಬಾರಿಗೆ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡರು. ಮಂಸೋರೆ ನಿರ್ದೇಶಿಸಿದ ಆ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯೂ ಲಭಿಸಿತ್ತು.
‘ನಾನು ಅವನಲ್ಲ ಅವಳು’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ
Image Credits : Mathrubhumi
2015ರಲ್ಲಿ ತೆರೆಗೆ ಬಂದ ಅವರ ನಟನೆಯ ‘ನಾನು ಅವನಲ್ಲ ಅವಳು’ ಸಿನಿಮಾ ಸಂಚಾರಿ ವಿಜಯ್ ಅವರ ವೃತ್ತಿ ಜೀವನವನ್ನೇ ಬದಲಾಯಿಸಿತು. ಈ ಚಿತ್ರದಲ್ಲಿ ಅವರ ಅದ್ಭುತ ನಟನೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳು ಸಿಕ್ಕವು. ಲಿಂಗಪರಿವರ್ತಿತ ವ್ಯಕ್ತಿಯೊಬ್ಬರ ಆತ್ಮಕತೆಯನ್ನಾಧರಿಸಿದ ಚಲನಚಿತ್ರವನ್ನು ಬಿ.ಎಸ್.ಲಿಂಗದೇವರು ನಿರ್ದೇಶಿಸಿದ್ದರು.
2017 ಮತ್ತು 2018ರಲ್ಲಿ ಸಂಚಾರಿ ವಿಜಯ್ ನಟನೆಯ 8-9 ಚಿತ್ರಗಳು ತೆರೆಗೆ ಬಂದವು. ಒಗ್ಗರಣೆ, ಕೃಷ್ಣ ತುಳಸಿ, ಆಟಕ್ಕುಂಟು ಲೆಕ್ಕಕ್ಕಿಕ್ಕ, ವಿಲನ್, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕಿಲ್ಲಿಂಗ್ ವೀರಪ್ಪನ್, ಅಲ್ಲಮ ಮುಂತಾದ ಅನೇಕ ಸಿನಿಮಾಗಳಲ್ಲಿ ಸಂಚಾರಿ ವಿಜಯ್ ನಟಿಸಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಮನೆ ಮಾತಾಗಿದ್ದ ಸಂಚಾರಿ ವಿಜಯ್ ತಮಗೆ ಸಿಕ್ಕ ಸೀಮಿತ ಅವಕಾಶದಲ್ಲೇ ಅಭಿನಯ ಸಾಮರ್ಥ್ಯವನ್ನು ತೋರಿಸಿದವರು. ‘ಆ್ಯಕ್ಟ್ 1978’ ಅವರ ಅಭಿನಯದ ಕೊನೆಯ ಚಿತ್ರ. ಈ ಸಿನಿಮಾದಲ್ಲಿ ವಿಜಯ್ ಕಮಾಂಡೋ ಪಾತ್ರ ನಿರ್ವಹಿಸಿದ್ದರು.
ಶ್ರುತಿ ಹರಿಹರನ್ ಜೊತೆ ಸಂಚಾರಿ ವಿಜಯ್ ಅಭಿನಯಿಸಿದ್ದ ನಾತಿಚರಾಮಿ ಸಿನಿಮಾಗೂ ಅತ್ಯುತ್ತಮ ಸಿನಿಮಾ ಎಂದು ರಾಷ್ಟ್ರ ಪ್ರಶಸ್ತಿ ಬಂದಿತ್ತು. ಈ ಸಿನಿಮಾ ವಿಮರ್ಶಾತ್ಮಕವಾಗಿ ಕನ್ನಡ ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ಕನ್ನಡ ಮಾತ್ರವಲ್ಲದೆ ಹಲವು ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೂ ಸಂಚಾರಿ ವಿಜಯ್ ಕೆಲಸ ಮಾಡಿದ್ದಾರೆ. ‘ಮೇಲೊಬ್ಬ ಮಾಯಾವಿ’ ಚಿತ್ರದಲ್ಲಿ ಅವರು ನಟಿಸುತ್ತಿದ್ದರು.
Image Source : cnbctv18.com
ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಹತ್ತು ವರ್ಷದಲ್ಲಿ ಕೆಲವೇ ಸಿನಿಮಾಗಳಲ್ಲಿ ಅಭಿನಯಿಸಿದ್ದರೂ ಸಂಚಾರಿ ವಿಜಯ್ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದರು. ಚಿತ್ರರಂಗದಲ್ಲಿ ಹೆಮ್ಮರವಾಗಿ ಬೆಳೆಯಬೇಕೆಂಬ ಅವರ ಕನಸು ಆರಂಭದಲ್ಲೇ ಕಮರಿಹೋಗಿದೆ. ಚಂದನವನ ಅತ್ಯದ್ಭುತ ನಟನೊಬ್ಬನನ್ನು ಕಳೆದುಕೊಂಡು ಬಡವಾಗಿದೆ.
ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನು ಫಾಲೋ ಮಾಡಿ
►Subscribe to Planet Tv Kannada
►Follow us on Facebook
https://www.facebook.com/Planettvkannada
►Follow us on Blogspot
https://planettvkannada.blogspot.com
►Follow us on Dailymotion
https://www.dailymotion.com/planettvkannada
►Follow us on Instagram
https://www.instagram.com/planettvkannada/
►Follow us on Pinterest
https://in.pinterest.com/Planettvkannada/
►Follow us on Koo App
https://www.kooapp.com/profile/planettvkannada
►Follow us on Twitter
https://twitter.com/Planettvkannada
►Follow us on Share Chat
https://sharechat.com/profile/planettvkannada
►Follow us on Tumgir
https://www.tumgir.com/planettvkannada
►Follow us on Tumbler
https://planettvkannada.tumblr.com/
►Follow us on Telegram
from Planet Tv
June 15, 2021 at 06:31AM