ಮಕ್ಕಳಿಲ್ಲ ಎಂಬ ಕೊರಗು ಬಿಟ್ಟು ಮರಗಳ ಮಹಾತಾಯಿಯಾದ ಸಾಲುಮರದ ತಿಮ್ಮಕ್ಕ
Image Credits : esamskriti
ಹಸಿರಿಲ್ಲದೆ ಉಸಿರಿಲ್ಲ..ಮನುಷ್ಯ ಕುಲದ ಜೀವಾಳವೇ ಹಸಿರು..ಭೂಮಿ, ಪ್ರಕೃತಿಯಿಲ್ಲದೆ ಮನುಷ್ಯನಿಲ್ಲ. ಮನುಷ್ಯ ಬದುಕಲು, ಭೂಮಿ, ಪರಿಸರ, ಗಿಡ-ಮರಗಳು ಅವಶ್ಯಕ. ಹೀಗಾಗಿಯೇ ಪರಿಸರ ಉಳಿಸಿ, ನಾಡು ಬೆಳೆಸಿ ಅನ್ನೋ ಮಾತೇ ಇದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿಯೇ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದು ಸಹ ಕರೆಯುತ್ತಾರೆ. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಪಂಚದಾದ್ಯಂತ ಗಿಡ ನೆಟ್ಟು ಜನರು ಸಂಭ್ರಮಿಸುತ್ತಾರೆ. ನೆಲ, ಮಣ್ಣು, ಬೆಳೆ, ಹೀಗೆ ಎಲ್ಲವೂ ಉಳಿಯುವಂತಾಗಲು ಈ ದಿನವನ್ನು ಜಾಗೃತ ದಿನವೆಂದು ಆಚರಿಸಲಾಗುತ್ತಿದೆ.
ಪರಿಸರ ಎಂದರೆ ಕರ್ನಾಟಕದಲ್ಲಿ ತಕ್ಷಣ ನೆನಪಾಗುವ ಹೆಸರು ಸಾಲುಮರದ ತಿಮ್ಮಕ್ಕ. ವೃಕ್ಷಮಾತೆ ಎಂದು ಸಹ ಇವರನ್ನು ಕರೆಯುತ್ತಾರೆ. ವರ್ಷಗಳ ಹಿಂದೆ ನೂರಾರು ಸಸಿಗಳನ್ನು ನೆಟ್ಟು ಪರಿಸರಕ್ಕೆ ಕೊಡುಗೆ ನೀಡಿರುವ ತಿಮ್ಮಕ್ಕ, ತಾವು ನೆಟ್ಟ ಸಾಲು ಸಸಿಗಳಿಂದಲೇ ಸಾಲು ಮರದ ತಿಮ್ಮಕ್ಕ ಎಂಬ ಹೆಸರು ಪಡೆದುಕೊಂಡರು. ಪರಿಸರಕ್ಕೆ ಸಾಲುಮರದ ತಿಮ್ಮಕ್ಕ ನೀಡಿರುವ ಕೊಡುಗೆಯ ಬಗ್ಗೆ ತಿಳಿದು ಅದೆಷ್ಟೋ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಅವರನ್ನು ಗೌರವಿಸಿವೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ತಿಮ್ಮಕ್ಕ ಅವರು ಜನಿಸಿದರು. ತಂದೆ ಚಿಕ್ಕರಂಗಯ್ಯ, ತಾಯಿ ವಿಜಯಮ್ಮ. ಶಾಲೆಗೆ ಹೋಗಲು ಸಾಧ್ಯವಾಗದಿದ್ದ ಕಾರಣ ತಿಮ್ಮಕ್ಕ ಮೊದಲು ದನಕರುಗಳನ್ನು ಮೇಯಿಸುತ್ತಿದ್ದರು. ನಂತ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದವರು.
ಮಕ್ಕಳಿಲ್ಲವೆಂಬ ಕೊರಗಿನಿಂದ ಗಿಡ ನೆಟ್ಟ ತಿಮ್ಮಕ್ಕ
Image Credits : Deccan chronicle
ಮದುವೆಯಾಗಿ ಅದೆಷ್ಟೋ ವರ್ಷಗಳಾದರೂ ತಿಮ್ಮಕ್ಕ ಅವರಿಗೆ ಮಕ್ಕಳಾಗಿರಲ್ಲಿಲ್ಲ. ಹೀಗಾಗಿ ತಿಮ್ಮಕ್ಕ ಮಕ್ಕಳಿಲ್ಲದ ದುಃಖವನ್ನು ಮರೆಯಲು ರಸ್ತೆಯ ಬದಿಗಳಲ್ಲಿ ಆಲದ ಸಸಿಗಳನ್ನು ನೆಡಲು ಆರಂಭಿಸಿದರು. ಕುದೂರಿನಿಂದ ಹುಲಿಕಲ್ ತನಕ ಇರುವ ರಾಜ್ಯ ಹೆದ್ದಾರಿ 94ರಲ್ಲಿ ತಿಮ್ಮಕ್ಕರವರು ಆಲದ ಸಸಿಗಳನ್ನು ನೆಟ್ಟರು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿ ಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ 4 ಕಿ.ಮೀ. ಉದ್ದಳತೆಯಲ್ಲಿ ಸಸಿಗಳನ್ನು ನೆಡಲಾಯಿತು. ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ 20 ಸಸಿಗಳನ್ನು ನೆಡಲಾಯಿತು.
ತಿಮ್ಮಕ್ಕ ದಂಪತಿ ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಗಂಡ-ಹೆಂಡತಿ ಇಬ್ಬರೂ ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನಾಲ್ಕು ಕಿ.ಮೀ ವರೆಗೆ ನೀರನ್ನು ಹೊತ್ತು ಕೊಂಡೊಯ್ಯುತ್ತಿದ್ದರು. ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸುತ್ತಿದ್ದರು. ನೀರಿನ ಅಭಾವ ಉಂಟಾಗಿ ಗಿಡಗಳಿಗೆ ತೊಂದರೆಯಾಗುತ್ತದೆ ಎಂದು ಅನಿಸಿದಾಗ, ಮತ್ತೆ ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ಗಿಡವನ್ನು ನೆಡಲು ಶುರು ಮಾಡಿದರು. ತಿಮ್ಮಕ್ಕ ಅವರ ಪತಿ 1991ರಲ್ಲಿ ಮೃತಪಟ್ಟರು.
ಸಾಲು ಮರದ ತಿಮ್ಮಕ್ಕ ಈ ರೀತಿ ತಮ್ಮ ಸ್ವಂತ ಖರ್ಚಿನಲ್ಲಿ 8000 ಸಸಿಗಳನ್ನು ನೆಟ್ಟಿದ್ದಾರೆ. ಇಂದಿಗೆ ಅವುಗಳ ಮೌಲ್ಯವು ಸುಮಾರು 15ಕ್ಕೂ ಲಕ್ಷ ಅಧಿಕ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ. ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ. ಅನಕ್ಷರಸ್ಥೆಯಾಗಿದ್ದರೂ ತಿಮ್ಮಕ್ಕ ಪರಿಸರ ಸಂರಕ್ಷಣೆಯಲ್ಲಿ ಮಹತ್ಕಾರ್ಯ ಮಾಡಿದರು. ಮುಂದಿನ ಪೀಳಿಗೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮರಗಳಿಗೆ ನೀರುಣಿಸಿ ಬೆಳೆಸಿದರು. ಪರಿಸರಕ್ಕೆ ತಿಮ್ಮಕ್ಕ ನೀಡಿರುವ ಕೊಡುಗೆಯನ್ನು ಗಮನಿಸಿ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ
ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ
Image Credits : Delhi Greens Blog
ಭಾರತ ಸರ್ಕಾರ 2019ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಾಗಳಲ್ಲಿ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಗೆ ತಿಮ್ಮಕ್ಕ ಹೆಸರನ್ನು ಇಡಲಾಗಿದೆ.
ಪ್ರಶಸ್ತಿ, ಪುರಸ್ಕಾರಗಳು
Images Credits : New York Minute Magazine
1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 1997ರಲ್ಲಿ ವೀರಚಕ್ರ ಪ್ರಶಸ್ತಿ. ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ ಇವರಿಂದ ಮಾನ್ಯತೆಯ ಪ್ರಮಾಣ ಪತ್ರ, ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ ತಿಮ್ಮಕ್ಕ ಅವರಿಗೆ ಲಭಿಸಿದೆ. ಅಷ್ಟೇ ಅಲ್ಲ, 2000ದಲ್ಲಿ ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, 2004ರಲ್ಲಿ ಗಾಡ್ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ, ಪಂಪಾಪತಿ ಪರಿಸರ ಪ್ರಶಸ್ತಿ, ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ವನಮಾತೆ ಪ್ರಶಸ್ತಿ, ಶ್ರೀಮಾತಾ ಪ್ರಶಸ್ತಿ, ಕರ್ನಾಟಕ ಪರಿಸರ ಪ್ರಶಸ್ತಿ, ನ್ಯಾಷನಲ್ ಸಿಟಿಜನ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹೀಗೆ ಹಲವು ಪ್ರಶಸ್ತಿಗಳು ವೃಕ್ಷಮಾತೆಯ ಮುಡಿಗೇರಿವೆ.
2010ರ ಸಾಲಿನ ಪ್ರತಿಷ್ಠಿತ ನಾಡೋಜ ಪ್ರಶಸ್ತಿ, 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಸಹ ಸಾಲುಮರದ ತಿಮ್ಮಕ್ಕ ಅವರಿಗೆ ಲಭಿಸಿದೆ. ಇಂದು, ಭಾರತದಲ್ಲಿ ಹಲವಾರು ಕಾಡು ಬೆಳೆಸುವ ಕಾರ್ಯಕ್ರಮಗಳಿಗೆ ತಿಮ್ಮಕ್ಕ ಅವರನ್ನು ಆಹ್ವಾನಿಸಲಾಗುತ್ತದೆ.
Featured Image Credits : Change.org
ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನು ಫಾಲೋ ಮಾಡಿ
►Subscribe to Planet Tv Kannada
►Follow us on Facebook
https://www.facebook.com/Planettvkannada
►Follow us on Blogspot
https://planettvkannada.blogspot.com
►Follow us on Dailymotion
https://www.dailymotion.com/planettvkannada
►Follow us on Instagram
https://www.instagram.com/planettvkannada/
►Follow us on Pinterest
https://in.pinterest.com/Planettvkannada/
►Follow us on Koo App
https://www.kooapp.com/profile/planettvkannada
►Follow us on Twitter
https://twitter.com/Planettvkannada
►Follow us on Share Chat
https://sharechat.com/profile/planettvkannada
►Follow us on Tumgir
https://www.tumgir.com/planettvkannada
►Follow us on Tumbler
https://planettvkannada.tumblr.com/
►Follow us on Telegram
from Planet Tv https://ift.tt/2SYdYaP
June 05, 2021 at 01:03PM