ಕರ್ನಾಟಕದಲ್ಲಿ ಗಣೇಶನ ಭಕ್ತಾರು ಕೋಟ್ಯಂತರ ಮಂದಿ ಇದ್ದಾರೆ. ಗಣೇಶನಿಗೆಂದೇ ಇರುವ ಸಾವಿರಾರು ದೇಗುಲಗಳು ಕರ್ನಾಟಕದ ಉದ್ದಕ್ಕೂ ಇವೆ. ಆದರೆ ಕೆಲ ದೇಗುಲಗಳು ಬಹಳ ಪ್ರಾಮುಖ್ಯತೆ, ಇತಿಹಾಸವನ್ನು ಹೊಂದಿವೆ. ಅಂತಹ ಕೆಲ ಅತ್ಯಂತ ಪ್ರಮುಖ ಗಣೇಶನ ದೇಗುಲಗಳ ಬಗ್ಗೆ ಕಿರು ಮಾಹಿತಿ ಇಲ್ಲಿದೆ.
ಇಡಗುಂಜಿ ದೇಗುಲ, ಉತ್ತರ ಕನ್ನಡ
Image Credits : Pinterest
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿರುವ ಇಡಗುಂಜಿ ಗಣಪತಿ ಕರ್ನಾಟಕದ ಪ್ರಸಿದ್ಧ ಗಣಪತಿ ದೇವಾಲಯಗಳಲ್ಲೊಂದಾಗಿದೆ. ಒಂದು ಕೈಯಲ್ಲಿ ಮೋದಕ ಮತ್ತು ಇನ್ನೊಂದು ಕೈಯಲ್ಲಿ ಕಮಲವನ್ನು ಹಿಡಿದಿರುವ ಇಲ್ಲಿನ ಗಣೇಶನ್ನು ನೋಡಲು ವರ್ಷಕ್ಕೆ 10 ಲಕ್ಷಕ್ಕಿಂತಲೂ ಹೆಚ್ಚು ಜನರು ಬರುತ್ತಾರೆ. ಮುನಿಗಳು ವಾಸಿಸುತ್ತಿದ್ದ ಕುಂಜಾರಣ್ಯ ಎಂಬ ಪ್ರದೇಶವೇ ಆಮೇಲೆ ಇಡಗುಂಜಿ ಆಯಿತೆಂಬುದು ಇಲ್ಲಿನ ಐತಿಹ್ಯ. ಜನರು ಈ ಗಣೇಶ ಸಾಕಷ್ಟು ಶಕ್ತಿಶಾಲಿ ಎಂದು ನಂಬುತ್ತಾರೆ.
ಆನೆ ಗುಡ್ಡೆ ಗಣೇಶ, ಕುಂದಾಪುರ
Image Credits : Pinterest
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ಗ್ರಾಮದಲ್ಲಿ ಈ ದೇವಾಲಯವಿದೆ. ಕುಂಭಾಶಿ ಎಂದೂ ಈ ಗ್ರಾಮವನ್ನು ಕರೆಯುತ್ತಿದ್ದು, ಇಲ್ಲಿನ ಗಣಪತಿಗೆ ಸಿದ್ಧಿ ವಿನಾಯಕ ಮತ್ತು ಸರ್ವ ಸಿದ್ಧಿ ಪ್ರದಾಯಕ ಎಂಬ ಹೆಸರೂ ಇದೆ. ಕರಾವಳಿ ಕರ್ನಾಟಕ (ಪರಶುರಾಮ ಕ್ಷೇತ್ರ) ದಲ್ಲಿನ ಏಳು ಮುಕ್ತಿ ಸ್ಥಳಗಳಲ್ಲಿ ಒಂದಾಗಿದೆ ಆನೆ ಗುಡ್ಡೆ. ಈ ದೇಗುಲದಲ್ಲಿರುವ ಗಣೇಶ ಸ್ವಯಂಭೂ ಎಂದು ಹೇಳಲಾಗಿದೆ.
ದೊಡ್ಡ ಗಣಪತಿ, ಬೆಂಗಳೂರು
Image Credits : Tripadvisor
ದೊಡ್ಡ ಗಣೇಶನ ಗುಡಿ ಬೆಂಗಳೂರಿನ ಬಸವನಗುಡಿಯಲ್ಲಿದೆ. ಸಾಂಸ್ಕೃತಿಕವಾಗಿ, ಸಾಹಿತ್ಯಕವಾಗಿ ಶ್ರೀಮಂತವಾದ ಈ ಪ್ರದೇಶ ಧಾರ್ಮಿಕತೆಯ ನೆಲೆ. ಬೆಂಗಳೂರಿನಲ್ಲಿರುವ ಹಲವು ಪುರಾತನ ದೇವಾಲಯಗಳ ಪೈಕಿ ಬಸವನಗುಡಿಯ ದೊಡ್ಡ ಗಣೇಶನ ದೇವಾಲಯ ಪ್ರಮುಖವಾದದ್ದು. ಕಹಳೆ ಬಂಡೆ ಅಥವಾ ಬ್ಯೂಗಲ್ ರಾಕ್ ಉದ್ಯಾನಕ್ಕೆ ಹೊಂದಿಕೊಂಡಿರುವ ವಿಶಾಲ ಪ್ರದೇಶದಲ್ಲಿ ದೊಡ್ಡ ಗಣೇಶನ ದೇವಾಲಯವಿದೆ. ಗರ್ಭಗುಡಿಯಲ್ಲಿ ಏಕಶಿಲೆಯಲ್ಲಿ ಕಡೆದ 8 ಅಡಿ ಎತ್ತರ ಹಾಗೂ 12 ಅಡಿ ಅಗಲ ಇರುವ ಗಣೇಶನ ವಿಗ್ರಹವಿದೆ. ಈ ಗಣಪ ಸ್ವಯಂ ಉದ್ಭವ ಗಣಪ ಎಂತಲೂ ಹೇಳುತ್ತಾರೆ.
ಹಟ್ಟಿಯಂಗಡಿ ಸಿದ್ಧಿ ವಿನಾಯಕ, ಉಡುಪಿ
Image Credits : RVA Temples
ಹಟ್ಟಿಯಂಗಡಿ ದೇವಾಲಯವು ಉಡುಪಿಯಲ್ಲಿದೆ. ಈ ದೇವಾಲಯವು ಅಲೂಪ ರಾಜರ ಕಾಲದಲ್ಲಿ ನಿರ್ಮಿಸಲ್ಪಟ್ಟಿದೆ. ಆ ಕಾಲದಲ್ಲೇ ಗಣೇಶನ ವಿಗ್ರಹವನ್ನು ಸ್ಥಾಪಿಸಿದ್ದರು. ಹಟ್ಟಿಯಂಗಡಿ ದೇವಾಲಯ ವರಾಹಿ ನದಿ ದಡದ ಬಳಿ ಇದೆ.
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ, ದಕ್ಷಿಣ ಕನ್ನಡ
Image Credits : Tripadvisor
ಈ ದೇವಾಲಯವು ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ಕೊಕ್ಕಡದಿಂದ ಸುಮಾರು 3 ಕಿ.ಮೀ. ದೂರದಲ್ಲಿದೆ. ಈ ಕ್ಷೇತ್ರದ ವಿಶೇಷತೆಯೆಂದರೆ ಇಲ್ಲಿನ ಆರಾಧ್ಯ ದೇವರಾದ ಗಣಪನಿಗೆ ಗರ್ಭಗುಡಿ ಇಲ್ಲ. ಈ ಕ್ಷೇತ್ರವು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಸುಮಾರು 35 ಕಿ.ಮೀ., ಧರ್ಮಸ್ಥಳದಿಂದ ಸುಮಾರು 16 ಕಿ.ಮೀ. ದೂರದಲ್ಲಿದೆ. ಭಕ್ತರು ಈ ದೇವಾಲಯಕ್ಕೆ ಹರಕೆ ರೂಪದಲ್ಲಿ ಗಂಟೆಗಳನ್ನು ನೀಡುವುದು ಇಲ್ಲಿಯ ವಿಶೇಷತೆ.
ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನು ಫಾಲೋ ಮಾಡಿ
►Subscribe to Planet Tv Kannada
►Follow us on Facebook
https://www.facebook.com/Planettvkannada
►Follow us on Blogspot
https://planettvkannada.blogspot.com
►Follow us on Dailymotion
https://www.dailymotion.com/planettvkannada
►Follow us on Instagram
https://www.instagram.com/planettvkannada/
►Follow us on Pinterest
https://in.pinterest.com/Planettvkannada/
►Follow us on Koo App
https://www.kooapp.com/profile/planettvkannada
►Follow us on Twitter
https://twitter.com/Planettvkannada
►Follow us on Share Chat
https://sharechat.com/profile/planettvkannada
►Follow us on Tumgir
https://www.tumgir.com/planettvkannada
►Follow us on Tumbler
https://planettvkannada.tumblr.com/
►Follow us on Telegram
from Planet Tv https://ift.tt/3E7USSE
September 10, 2021 at 07:51PM