ಹಬ್ಬ, ಉತ್ಸವ ಇತ್ಯಾದಿಗಳೆಡೆ ಕೇವಲ ರೂಢಿಯೆಂದು ನೋಡಬೇಡಿ, ಅದರ ಹಿಂದಿನ ಗೂಢಾರ್ಥ ಮತ್ತು ಶಾಸ್ತ್ರವನ್ನು ಅರಿತುಕೊಳ್ಳಿ ! ಭಾರತದಲ್ಲಿ ಅನೇಕ ಹಬ್ಬ, ಉತ್ಸವ ಮತ್ತು ಪರಂಪರೆಗಳಿವೆ. ಬಹುತೇಕ ಜನರು ಅದರೆಡೆಗೆ ಕೇವಲ ರೂಢಿಯೆಂದು ನೋಡುತ್ತಾರೆ ಮತ್ತು ಆ ದೃಷ್ಟಿಯಿಂದಲೇ ಆಚರಿಸುತ್ತಾರೆ.
ಅದರ ಹಿಂದಿನ ಗೂಢಾರ್ಥ ಮತ್ತು ಶಾಸ್ತ್ರವನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಧರ್ಮ ಮತ್ತು ಸಂಸ್ಕೃತಿ ಇವುಗಳ ಹಾನಿ ಮಾಡುವ ರೂಢಿಗಳನ್ನು ವಿರೋಧಿಸಿ. ಇತ್ತೀಚೆಗೆ ಇಂತಹ ರೂಢಿಗಳು ಜನರ ಮನಸ್ಸಿನಲ್ಲಿ ಮಹತ್ವದ ಸ್ಥಾನ ಪಡೆದಿವೆ. ಉದಾಹರಣೆಗೆ ದೀಪಾವಳಿ ಮತ್ತು ಗಣೇಶೋತ್ಸವಗಳಲ್ಲಿ ಪಟಾಕಿ ಸಿಡಿಸುವುದು, ಗಣೇಶೋತ್ಸವ ಮತ್ತು ನವರಾತ್ರ್ಯೋತ್ಸವಗಳ ನಿಮಿತ್ತ ಅನೇಕ ಅಯೋಗ್ಯ ಪದ್ಧತಿಗಳಾಗುತ್ತವೆ. ಈ ರೂಢಿಗಳೆಂದರೇ ಹಬ್ಬ ಮತ್ತು ಉತ್ಸವಗಳನ್ನು ಆಚರಿಸುವ ಪದ್ಧತಿ ಎಂಬ ತಪ್ಪು ಸಂಸ್ಕಾರವು ಭಾವೀ ಪೀಳಿಗೆಯ ಮೇಲಾಗುತ್ತಿದೆ. ಈ ರೂಢಿಗಳನ್ನು ಬಹಿಷ್ಕರಿಸುವುದು ಮತ್ತು ಅವುಗಳನ್ನು ವಿರೋಧಿಸುವುದು ಧರ್ಮಪಾಲನೆಯೇ ಆಗಿದೆ.
ಮಣ್ಣಿನ ಗಣೇಶನ ಪೂಜಿಸಿ
Image Credits : Pinterest
ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ಮೂರ್ತಿಯನ್ನು ತಯಾರಿಸಬೇಕು ಎಂಬ ಶಾಸ್ತ್ರವಿದೆ. ಪಾರ್ವತಿಯು ತಯಾರಿಸಿದ ಶ್ರೀ ಗಣೇಶನು ಮಹಾಗಣಪತಿಯ ಅವತಾರವಾಗಿದ್ದಾನೆ. ಅವಳು ಮಣ್ಣಿನ ಆಕಾರ ಮಾಡಿ ಅದರಲ್ಲಿ ಗಣೇಶನ ಆವಾಹನೆಯನ್ನು ಮಾಡಿದಳು. ಪುರಾಣದಲ್ಲಿ ಶ್ರೀ ಗಣೇಶನು ಮಣ್ಣಿನಿಂದ ನಿರ್ಮಾಣವಾಗಿದ್ದಾನೆ ಎಂದು ಹೇಳಲಾಗಿದೆ.ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು ಎಂದು ಶಾಸ್ತ್ರವಿದೆ.
ಶ್ರೀ ಗಣೇಶನ ಮೂರ್ತಿಯನ್ನು ಜೇಡಿಮಣ್ಣಿನಿಂದ ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಇತ್ತೀಚೆಗೆ ಮಾತ್ರ ಭಾರ ಕಡಿಮೆಯಾಗಬೇಕು ಮತ್ತು ಅದು ಹೆಚ್ಚು ಆಕರ್ಷಕವಾಗಿ ಕಾಣಿಸಬೇಕೆಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಮೂರ್ತಿಗಳನ್ನು ತಯಾರಿಸಲಾಗುತ್ತದೆ. ಮಣ್ಣಿನ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಗಣೇಶ ಮೂರ್ತಿಯಲ್ಲಿ ವ್ಯತ್ಯಾಸವಿದೆ.
ಮಣ್ಣಿನ ಮೂರ್ತಿ ಲಾಭಗಳು
ಮಣ್ಣಿನ ಮೂರ್ತಿಯಲ್ಲಿ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ. ‘ಮಣ್ಣಿನಲ್ಲಿರುವ ಪೃಥ್ವಿ ತತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ. ತದ್ವಿರುದ್ಧವಾಗಿ ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯೂ ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.
ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ. ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ.
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಹಾನಿ
‘ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ. ಹೀಗೆ ಮಾಡುವುದು ಶ್ರೀಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಸನ್ಮಾನದಿಂದ ನಾವು ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಸನ್ಮಾನದಿಂದ ಅವನನ್ನು ಬೀಳ್ಕೊಡುವುದೂ ಅವಶ್ಯಕ. ಗಣಪತಿಯ ಘೋರ ವಿಡಂಬನೆಯಾಗುವುದರಿಂದ ಘೋರ ಪಾಪ ತಗಲುತ್ತದೆ. ಹಾಗಾಗಿ ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ.
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.
ಕಾಗದದ ಮೂರ್ತಿಯೂ ಬೇಡ
Image Credits : Pinterest
ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (ಇಕಾಲಾಜಿಕಲ್ ಫ್ರೆಂಡ್ಲಿ ಅಂದರೆ ಪರಿಸರ ಸ್ನೇಹಿ) ಗಣೇಶಮೂರ್ತಿಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕಾರಕವೂ ಆಗಿದೆ. ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.
ಗಣೇಶ ಹಬ್ಬವನ್ನು ಶುದ್ಧ ಮನಸಿನಿಂದ, ಭಕ್ತಿಪೂರ್ವಕವಾಗಿ ಆಚರಿಸಿದರೆ ಶ್ರೀ ಗಣೇಶನು ಖಂಡಿತವಾಗಿಯೂ ಒಲಿಯುತ್ತಾನೆ. ನಿಮ್ಮ ಕೋರಿಕೆಗಳನ್ನು ಗಣೇಶನು ಈಡೇರಿಸುತ್ತಾನೆ ಎನ್ನುವುದರ ಬಗ್ಗೆ ನಂಬಿಕೆಯಿಡಿ.
ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನು ಫಾಲೋ ಮಾಡಿ
►Subscribe to Planet Tv Kannada
►Follow us on Facebook
https://www.facebook.com/Planettvkannada
►Follow us on Blogspot
https://planettvkannada.blogspot.com
►Follow us on Dailymotion
https://www.dailymotion.com/planettvkannada
►Follow us on Instagram
https://www.instagram.com/planettvkannada/
►Follow us on Pinterest
https://in.pinterest.com/Planettvkannada/
►Follow us on Koo App
https://www.kooapp.com/profile/planettvkannada
►Follow us on Twitter
https://twitter.com/Planettvkannada
►Follow us on Share Chat
https://sharechat.com/profile/planettvkannada
►Follow us on Tumgir
https://www.tumgir.com/planettvkannada
►Follow us on Tumbler
https://planettvkannada.tumblr.com/
►Follow us on Telegram
from Planet Tv https://ift.tt/3ni7jFB
September 09, 2021 at 08:15PM