ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇನ್ನಿಲ್ಲ
ಹೃದಯಾಘಾತದಿಂದ ಪುನೀತ್ ರಾಜ್ಕುಮಾರ್ ಸಾವು
ಸ್ಯಾಂಡಲ್ವುಡ್ಗೆ ಶಾಕ್
ಸ್ಯಾಂಡಲ್ವುಡ್ ಪಾಲಿಗೆ ಶುಕ್ರವಾರ ಶುಭಕರವಾದ್ದದ್ದಲ್ಲ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಟ ಭಯಂಕರ ರಾಜ್ಕುಮಾರ್ರ ಕೊನೆಯ ಮಗ, ಸ್ಯಾಂಡಲ್ವುಡ್ನ ರಾಜಕುಮಾರ ಪುನೀತ್ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತವಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರನ್ನು ಕೂಡಲೇ ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜೀವನ್ಮರಣದ ಹೋರಾಟದಲ್ಲಿ ಪುನೀತ್ ಗೆದ್ದು ಬರಲಿಲ್ಲ. ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಫಲ ನೀಡಲಿಲ್ಲ.
ಭಜರಂಗಿ-2 ಸಿನಿಮಾ ಬಿಡುಗಡೆ ಸಂಭ್ರಮದಲ್ಲಿ ಶಿವರಾಜ್ಕುಮಾರ್ ತಮ್ಮ ಸಹೋದರನಿಗೆ ಹೃದಯಾಘಾತವಾದ ಸುದ್ದಿ ಕೇಳಿ ಥಿಯೇಟರ್ನಿಂದ ಆಸ್ಪತ್ರೆಗೆ ದೌಡಾಯಿಸಿದರು. ಇಡೀ ಕನ್ನಡ ಚಿತ್ರರಂಗವೇ ಆಸ್ಪತ್ರೆಯತ್ತ ಧಾವಿಸಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಪಕ್ಷಗಳ ರಾಜಕೀಯ ನಾಯಕರು ಆಸ್ಪತ್ರೆಗೆ ತೆರಳಿದ್ದಾರೆ.
ಪುನೀತ್ರ ಅಂತ್ಯ ಸಂಸ್ಕಾರಕ್ಕೆ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ಸಿಎಂ ಹೇಳಿದ್ದಾರೆ.
from Planet Tv https://ift.tt/3jQ3ftB
October 29, 2021 at 02:47PM