ಗೊಂಬೆ ಇಡುವುದರ ಹಿಂದಿನ ಸಂಪ್ರದಾಯದ ಬಗ್ಗೆ ತಿಳಿದುಕೊಳ್ಳಿ
Featured Image Source : Boldsky
ನವರಾತ್ರಿ ಹಬ್ಬ ಬಂತು ಎಂದರೆ ಮನೆಗಳಲ್ಲಿ ಸಂಭ್ರಮವೋ ಸಂಭ್ರಮ. ಅದರಲ್ಲೂ ಮಕ್ಕಳಿರುವ ಮನೆಗಳಲ್ಲಿ ಸಂಭ್ರಮ ಸ್ವಲ್ಪ ಜಾಸ್ತಿಯೇ ಇರುತ್ತದೆ. ಇದಕ್ಕೆ ಕಾರಣ ಮನೆಗಳಲ್ಲಿ ಗೊಂಬೆಗಳನ್ನು ಇಡುವುದು.
ನವರಾತ್ರಿ ಇಲ್ಲವೇ ದಸರಾ ಹಬ್ಬದ ಪ್ರಮುಖ ಆಕರ್ಷಣೆಯೇ ಗೊಂಬೆಗಳು. ಗೊಂಬೆಗಳನ್ನು ಇಡುವ ಸಂಪ್ರದಾಯ ದಕ್ಷಿಣ ಭಾರತದಲ್ಲಿದೆ.
18ನೇ ಶತಮಾನದಲ್ಲೇ ಆರಂಭವಾಗಿತ್ತು
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿ ಗೊಂಬೆ ಹಬ್ಬ ಜನಪ್ರಿಯ. ಕನ್ನಡದಲ್ಲಿ ಇದನ್ನು ಗೊಂಬೆ ಹಬ್ಬ ಎಂದೂ ಕರೆಯುತ್ತಾರೆ. ದಸರಾ ಗೊಂಬೆ ಕೂರಿಸುವ ಪದ್ಧತಿ 18ನೇ ಶತಮಾನದಿಂದ ಮನೆಮನೆಯಲ್ಲೂ ಜಾರಿಗೆ ಬಂದಿದೆ.
ಮೈಸೂರಲ್ಲಿ ಮೊದಲು ಆರಂಭ
ದಸರಾ ಹಬ್ಬದಲ್ಲಿ ಮನೆ ಮನೆಗಳಲ್ಲಿ ಗೊಂಬೆಗಳನ್ನು ಕೂರಿಸುವ ಪದ್ಧತಿಯು ಮೈಸೂರು ಪ್ರಾಂತ್ಯದಲ್ಲಿ ಮೊಟ್ಟಮೊದಲು ಆರಂಭವಾಯಿತು ಎನ್ನಲಾಗುತ್ತದೆ. ಮೈಸೂರು ದಸರಾ ಎಂದು ಜಗತ್ಪ್ರಸಿದ್ಧಿ ಪಡೆದಿರುವ ಆಚರಣೆ ಮೈಸೂರು ಅರಮನೆಯಲ್ಲಿ ನಡೆದರೆ, ಪ್ರಜೆಗಳೆಲ್ಲರ ಮನೆಯಲ್ಲಿ ಹಬ್ಬದ ಸಂಭ್ರಮವಾಗಿ ಪಟ್ಟದ ಗೊಂಬೆಗಳನ್ನು ಇಟ್ಟು ಪೂಜಿಸುವ ಪದ್ಧತಿ ಬೆಳೆದುಕೊಂಡು ಬಂತು.
ಗೊಂಬೆಗಳನ್ನು ಇಡುವುದರ ಮಹತ್ವವೇನು?
ಸಮಸ್ತ ಸೃಷ್ಟಿ ಒಂದೇ ವಸ್ತುವಿನಿಂದ ಆಗಿದೆ ಎಂದು ಮಹತ್ವವನ್ನು ಸಾರುವುದೇ ದಸರಾ ಸಮಯದಲ್ಲಿ ಬೊಂಬೆ ಇಡುವುದರ ಸಂಕೇತ. ಬೊಂಬೆಗಳನ್ನು ಕೂರಿಸುವುದರಲ್ಲಿ ದೇವತೆಗಳಿಂದ ಹಿಡಿದು ಸಾಧು-ಸಂತರು, ಸತ್ಪುರುಷರು, ಸಾಮಾನ್ಯ ಮನುಷ್ಯರು, ಜನರ ಜೀವನಶೈಲಿ, ಹಳ್ಳಿ ಬದುಕು, ವ್ಯಾಪಾರ, ಕೃಷಿ, ಕ್ರೀಡೆ, ಉದ್ಯೋಗ ಪಶು-ಪಕ್ಷಿಗಳು ಹೀಗೆ ಸಕಲವೂ ದೇವರ ಅನುಗ್ರಹವಾಗಿದ್ದು, ಯಾವುದನ್ನೂ ತುಚ್ಛವಾಗಿ ನೋಡಬಾರದು, ಈ ಪ್ರಕೃತಿಯಲ್ಲಿರುವ ಪ್ರತಿಯೊಂದು ಮುಖ್ಯವೇ ಎಂದು ಬೊಂಬೆಗಳು ಸಂದೇಶ ಸಾರುತ್ತವೆ.
ಬೊಂಬೆಗಳನ್ನು ಮನೆಗಳಲ್ಲಿ ಇಟ್ಟ ಬಳಿಕ ಪ್ರತಿ ನಿತ್ಯ ಅದಕ್ಕೆ ಪೂಜೆ ಮಾಡಬೇಕು. ನೈವೇದ್ಯ ಮಾಡಿ ಸಂಜೆ ವೇಳೆ ಆರತಿ ಮಾಡಬೇಕು. ಸುತ್ತಮುತ್ತಲಿನ ಜನರನ್ನು ಕರೆದು ಅರಿಶಿನ ಕುಂಕುಮ, ಪ್ರಸಾದ ವಿನಿಯೋಗ ಮಾಡುವ ಪದ್ಧತಿಯೂ ಇದೆ.
ಮನೆಗಳಲ್ಲಿ ಇಟ್ಟ ಬೊಂಬೆಗಳನ್ನು ನೋಡಲು ಜನರು ಪರಸ್ಪರ ಭೇಟಿ ಮಾಡುವುದು ಸಾಮಾನ್ಯ. ಇದರೊಂದಿಗೆ ಸಂಬಂಧಿಗಳು, ಸ್ನೇಹಿತರು, ಪರಿಚಯಸ್ಥರು, ಇಷ್ಟವಾದರು ಒಂದೆಡೆ ಸೇರಲು ಒಂದು ಸಂದರ್ಭ ಸೃಷ್ಟಿಯಾಗುತ್ತದೆ.
ಗೊಂಬೆಗಳು ನಮ್ಮ ಜೀವನಕ್ಕೆ ಹಲವು ಪಾಠಗಳನ್ನು ಹೇಳಿಕೊಡುತ್ತವೆ. ದೇವರ ದೃಷ್ಟಿಯಲ್ಲಿ ನಾವೂ ಬೊಂಬೆಗಳೇ, ಅವನ ಆದೇಶದಂತೆ, ಅವರ ಇಚ್ಛೆಯಂತೆಯೇ ಎಲ್ಲವೂ ನಡೆಯುತ್ತದೆ ಎನ್ನುವುದನ್ನು ನಾವು ಮರೆಯುವ ಹಾಗಿಲ್ಲ.
ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನು ಫಾಲೋ ಮಾಡಿ
►Subscribe to Planet Tv Kannada
►Follow us on Facebook
https://www.facebook.com/Planettvkannada
►Follow us on Blogspot
https://planettvkannada.blogspot.com
►Follow us on Dailymotion
https://www.dailymotion.com/planettvkannada
►Follow us on Instagram
https://www.instagram.com/planettvkannada/
►Follow us on Pinterest
https://in.pinterest.com/Planettvkannada/
►Follow us on Koo App
https://www.kooapp.com/profile/planettvkannada
►Follow us on Twitter
https://twitter.com/Planettvkannada
►Follow us on Share Chat
https://sharechat.com/profile/planettvkannada
►Follow us on Tumgir
https://www.tumgir.com/planettvkannada
►Follow us on Tumbler
https://planettvkannada.tumblr.com/
►Follow us on Telegram
from Planet Tv https://ift.tt/2YsZwu1
October 07, 2021 at 04:25PM